ಇಂದು ಸಂಜೆ ರಾಜೀನಾಮೆ ಸಲ್ಲಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಜಾಧವ್ ಸಹೋದರ ರಾಮಚಂದ್ರ ಜಾಧವ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಉಮೇಶ ಜಾಧವ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂದಿನ ನಡೆಯ ಬಗ್ಗೆ ಇಂದು ಅಥವಾ ನಾಳೆ ಉಮೇಶ್ ಜಾಧವ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲ್ಲಿದ್ದಾರೆಂಬ ವಿಶ್ವಾಸ ಸಹ ವ್ಯಕ್ತ ಪಡಿಸಿದ ರಾಮಚಂದ್ರ ಜಾಧವ್, ಫೆ.15ರಂದು ಕಲಬುರಗಿಯಲ್ಲಿ ನಡೆಯಲಿರುವ ಸಂತ ಶ್ರೀ ಸೇವಾಲಾಲ ಜಯಂತಿಯಲ್ಲಿ ಶಾಸಕ ಉಮೇಶ್ ಜಾಧವ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.