ಅಮೆರಿಕ ಅಧ್ಯಕ್ಷರು ವಾಸವಿರುವ ಶ್ವೇತ ಭವನದ ಮೇಲೆ ಒಂದೊಮ್ಮೆ ಭಯೋತ್ಪಾದಕ ದಾಳಿ ನಡೆದರೆ ಸೀಕ್ರೆಟ್ ಸರ್ವಿಸ್ ದಳಕ್ಕೆ ಕೂಡ ಟ್ರಂಪ್ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ವ್ಯಕ್ತಿಯೋರ್ವ ಅತ್ಯಂತ ಬಿಗಿ ಭದ್ರತೆಯ ಶ್ವೇತ ಭವನ ಆವರಣದ ಗೋಡೆ ಹಾರಿ ಒಳಬಂದು ಸುಮಾರು 15 ನಿಮಿಷಗಳ ಕಾಲ ಶ್ವೇತ ಭವನ ಆವರಣದ ತುಂಬೆಲ್ಲ ಓಡಾಡಿದ್ದ. ಅದಾಗಿ ವಾರದ ಬಳಿಕ ಡ್ಯಾನ್ ಬಾಂಗಿನೋ ಅವರು ಈ ಎಚ್ಚರಿಕೆಯನ್ನು ಕೊಟ್ಟಿರುವುದು ಗಮನಾರ್ಹವಾಗಿದೆ.
ಡ್ಯಾನ್ ಬಾಂಗಿನೋ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಮತ್ತು ಜಾರ್ಜ್ ಡಬ್ಲ್ಯು ಬುಶ್ ಅವರಿಗೆ ಸೀಕ್ರೆಟ್ ಸರ್ವಿಸ್ ಏಜೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ.