ಬಜೆಟ್ನಲ್ಲಿ ಕನ್ನಡ ಚಿತ್ರೋದ್ಯಮಕ್ಕೆ ಅನೇಕ ಕೊಡುಗೆ ನೀಡಲಾಗಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಶ್ರಮವನ್ನು ಶ್ಲಾಘಿಸಿದ್ದಾರೆ. ಬಜೆಟ್ನಲ್ಲಿ ಪ್ರಕಟಿಸಿರುವ ವಿವಿಧ ಕ್ರಮಗಳಿಂದಾಗಿ ಕನ್ನಡ ಸಿನಿಮಾ ನಿರ್ಮಾಪಕರು ನಿಟ್ಟುಸಿರು ಬಿಡುವಂತಾಗಿದೆ ಎಂದೂ ಸುದೀಪ್ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಸಿನಿಮಾ ನೋಡುವವರಿಗೆ ಸಿಹಿ ಸುದ್ದಿ...ಸಿದ್ದು ಬಜೆಟ್ನಲ್ಲಿ ಚಿತ್ರರಂಗಕ್ಕೇನು ಕೊಡುಗೆ?
ಮಂಡನೆಯಾಗಿರುವ ಬಜೆಟ್ನಲ್ಲಿ ಮೈಸೂರಿನ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಣ ಮೀಸಲಿಟ್ಟಿದ್ದಾರೆ. ಇದರ ಜತೆಗೆ ಚಲನಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಆರೋಗ್ಯ ಸೇವೆಗಾಗಿ ಸ್ಥಾಪಿಸಿರುವ ದತ್ತಿ ನಿಧಿಯ ಮೊತ್ತವನ್ನು ಒಂದು ಕೋಟಿ ರೂಪಾಯಿಗಳಿಂದ 10 ಕೋಟಿಗೆ ಹೆಚ್ಚಿಸಲಾಗಿದೆ.
ರಾಜ್ಯದಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಒಂದು ಪರದೆಯಲ್ಲಿ ಮಧ್ಯಾಹ್ನ 1.30ರಿಂದ 7.30ರವರೆಗೆ ಪ್ರಮುಖ ಅವಧಿಯಲ್ಲಿ ಕನ್ನಡ ಹಾಗೂ ಪ್ರಾದೇಶಿಕ ಭಾಷೆಗಳ ಚಲನಚಿತ್ರ ಪ್ರದರ್ಶನವನ್ನು ಕಡ್ಡಾಯಗೊಳಿಸಲಾಗಿದೆ.
ಇನ್ನು, ಸೆಂಚೂರಿ ಸ್ಟಾರ್ ಶಿವಣ್ಣ ಸಹ 2017-18 ಸಾಲಿನ 12ನೇ ರಾಜ್ಯ ಆಯವ್ಯಯ ಪಟ್ಟಿ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಒತ್ತು ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಚಿತ್ರೋದ್ಯಮ ಅಭಿವೃದ್ಧಿಗೆ ಒತ್ತು...ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಶಿವಣ್ಣ
ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಮಧ್ಯಾಹ್ನ 1-30 ರಿಂದ 7:30ವರೆಗೆ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯವೆಂದು ತಿಳಿಸಿರುವುದಕ್ಕೆ ಇದೊಂದು ಒಳ್ಳೆಯ ಬೆಳವಣಿಗೆ, ಈ ನಿರ್ಧಾರವನ್ನ ಸ್ವಾಗತಿಸುತ್ತೇವೆ ಎಂದಿದ್ದಾರೆ ಶಿವಣ್ದ.
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಒತ್ತು ನೀಡಿರುವುದು ಖುಷಿ ತಂದಿದೆ: ನಟ ಉಪೇಂದ್ರ
ಮತ್ತೊಂದೆಡೆ ಮೈಸೂರಿನಲ್ಲಿ ಶೂಟಿಂಗ್ನಲ್ಲಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೂಡ ಬಜೆಟ್ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಮೈಸೂರು ಒಂದು ಚಿತ್ರನಗರಿ ಇದ್ದಂತೆ. ಇಲ್ಲಿ ಸಿಗುವ ಲೊಕೇಷನ್ ಬೇರೆಲ್ಲೂ ಸಿಗದು. ಬಹುತೇಕ ಚಿತ್ರಗಳು ಮೈಸೂರಿನಲ್ಲೇ ಚಿತ್ರೀಕರಣವಾಗುತ್ತವೆ ಎಂದರು.
ಬೆಂಗಳೂರು ಟ್ರಾಫಿಕ್ನಿಂದ ಶೂಟಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರನಗರಿ ಕಾಮಗಾರಿಗೆ ಚಿತ್ರರಂಗದ ಗಣ್ಯರು ಕೈ ಜೋಡಿಸಬೇಕು. ಚಿತ್ರೀಕರಣ ನಡೆಯದೇ ಇದ್ದ ಸಂದರ್ಭದಲ್ಲಿಯೂ ವರಮಾನ ಬರುವ ರೀತಿ ನೋಡಿಕೊಳ್ಳಬೇಕು ಎಂದರು.