ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ತಂಡಕ್ಕೆ ಇದು ಕೊನೆಯ ಏಕದಿನ ಸರಣಿ ಆಗಲಿದ್ದು, ಈಗಾಗಲೇ ಆಸೀಸ್ ಹಾಗೂ ಕಿವೀಸ್ ಸರಣಿಯಲ್ಲಿ ಭಾಗಿಯಾಗಿರುವ ಕೆಲವೊಂದು ಹಿರಿಯ ಆಟಗಾರರು ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಇದೆ.
ತಂಡ ಆಯ್ಕೆಗಾಗಿ ಆಯ್ಕೆ ಸಮಿತಿ ಶುಕ್ರವಾರ ಸಭೆ ಸೇರಲಿದ್ದು, ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಪ್ರದರ್ಶನ ನೀಡಲು ಸಮತೋಲನ ತಂಡ ಪ್ರಕಟಗೊಳಿಸುವ ಸಾಧ್ಯತೆ ಇದೆ. ಇದರ ಮಧ್ಯೆ ವಿಶ್ವಕಪ್ ಮುಂದಿಟ್ಟುಕೊಂಡು ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಕೂಡ ದಟ್ಟವಾಗಿ ಕಂಡು ಬರುತ್ತಿದೆ.
ಪ್ರಮುಖವಾಗಿ ರೋಹಿತ್ ಶರ್ಮಾ, ಶಿಖರ್ ಧವನ್, ಎಂ.ಎಸ್. ಧೋನಿ ಹಾಗೂ ಭುವನೇಶ್ವರ್ ಕುಮಾರ್ ವಿಶ್ರಾಂತಿ ಪಡೆದುಕೊಂಡರೆ, ಕನ್ನಡಿಗ ಕೆಎಲ್ ರಾಹುಲ್, ಅಜಿಂಕ್ಯಾ ರಹಾನೆ ತಂಡಕ್ಕೆ ವಾಪಸ್ ಆಗುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿವೆ. ಜತೆಗೆ ರಿಷಭ್ ಪಂತ್ ಕೂಡ ತಂಡಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ. ಇನ್ನು ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ಜಸ್ಪ್ರೀತ್ ಬೂಮ್ರಾ ತಂಡಕ್ಕೆ ವಾಪಸ್ ಆಗಲಿದ್ದಾರೆ. ಉಳಿದಂತೆ ಕ್ಯಾಪ್ಟನ್ ವಿರಾಟ್ ಕೊಹ್ಲಿ,ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯಾ, ಅಂಬಾಟಿ ರಾಯುಡು,ಕೇದಾರ್ ಜಾಧವ್,ಯಜುವೇಂದ್ರ ಚಹಾಲ್,ಕುಲ್ದೀಪ್ ಯಾದವ್,ಮೊಹಮ್ಮದ್ ಶಮಿ, ವಿಜಯ್ ಶಂಕರ್ ತಂಡದಲ್ಲಿ ಇರುವ ಮುಖಗಳಾಗಿವೆ.