ನಾಗರಾಜ್ ಬಿ ಬಂದಮ್ಮನವರ(45) ಮೃತ ಪೊಲೀಸ್ ಪೇದೆ. ಪಟ್ಟಣದಲ್ಲಿ ನಡೆಯುತ್ತಿರೋ 11ನೇ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ಬಂದಮ್ಮನವರ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಈ ಪೇದೆ ಹಾವೇರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇನ್ನು ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಸಿಪಿಐ ಗೌಡಪ್ಪಗೌಡರ, ಡಿವೈಎಸ್ಪಿ ಕುಮಾರಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ನಾಗರಾಜ್ ಸಾವಿಗೆ ಸಂತಾಪ ವ್ಯಕ್ತಪಡಿಸಿದರು. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.