ಬಿಡದಿಯ ಲಕ್ಷ್ಮಿ ಸಾಗರದಲ್ಲಿನ ಹೈಟೆಕ್ ಫರ್ನಿಚರ್ ಮಳಿಗೆಯ ಬಳಿ ಕಾರು ನಿಲ್ಲಿಸಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಬಿಡದಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.